ರವಿವಾರ ಮಧ್ಯಾಹ್ನ 12ಕ್ಕೆ ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಆಚರಣೆ ತಹಶೀಲ್ದಾರ್ ನಿಶ್ಚಲ್ ನರೋನ್ಹಾ ಕಾರ್ಯಕ್ರಮ ಉದ್ಘಾಟಿಸಿದರು. ಕನ್ನಡ ಸಾಹಿತ್ಯ ಪರಿಷತ್ ತಾಲೂಕಾಧ್ಯಕ್ಷ ರಾಮಾ ನಾಯ್ಕ ಉಪನ್ಯಾಸಕರಾಗಿ ಪಾಲ್ಗೊಂಡಿದ್ದರು. ನಾಮದಾರಿ ಸಮಾಜದ ಉಪಾಧ್ಯಕ್ಷ ಸುನೀಲ್ ಸೋನಿ, ಜಿಲ್ಲಾಧಿಕಾರಿ ಕಚೇರಿಯ ಸಾಮಾಜಿಕ ಪಿಂಚಣಿ ವಿಭಾಗದ ಸಹಾಯಕ ನಿರ್ದೇಶಕ ಪ್ರಶಾಂತ್, ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಕಾರ್ಯಕ್ರಮದಲ್ಲಿದ್ದರು.