ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸಲು ಆಗ್ರಹಿಸಿ ರಾಯಚೂರು ನಗರದ ಹಳೆ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಎಐಡಿಎಸ್ಓ ಸಂಘಟನೆಯ ಪ್ರತಿಭಟನೆ ನಡೆಸಲಾಗಿದೆ. ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಂಘಟನೆಯ ಜಿಲ್ಲಾ ಅಧ್ಯಕ್ಷ ಹೈಯಾಳಪ್ಪ ಮಾತನಾಡಿ, ರಾಜ್ಯದ್ಯಂತ ಅತಿಥಿ ಉಪನ್ಯಾಸಕರು ಇಲ್ಲದ್ದರಿಂದ ಪದವಿ ತರಗತಿಗಳು ನಡೆಯುತ್ತಿಲ್ಲ ವಿದ್ಯಾರ್ಥಿಗಳು ಇದರಿಂದ ತುಂಬಾ ಸಮಸ್ಯೆ ಅನುಭವಿಸುವಂತೆ ಆಕ್ರೋಶ ವ್ಯಕ್ತಪಡಿಸಿದರು. ಕೂಡಲೇ ಅತಿಥಿ ಉಪನ್ಯಾಸಕರನ್ನು ನೇಮಕಗೊಳಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾ ಕಾರ್ಯದರ್ಶಿ ಬಸವರಾಜ್, ನಂದಗೋಪಾಲ, ಹೇಮಂತ್ ಸೇರಿದಂತೆ ನೂರಾರು ಜನ ವಿದ್ಯಾರ್ಥಿಗಳು ಭಾಗವಹಿಸಿದ್ದರು.