ಹುಬ್ಬಳ್ಳಿ: ನಾಡಹಬ್ಬ ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವುದನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ವಿವಿಧ ಹಿಂದೂಪರ ಸಂಘಟನೆಗಳು ಪ್ರತಿಭಟನೆ ನಡೆಸಿದವು. ನಗರದ ಚೆನ್ನಮ್ಮ ವೃತ್ತ ಹಾಗೂ ಸಂಗೊಳ್ಳಿ ರಾಯಣ್ಣ ವೃತ್ತದಿಂದ ತಹಶಿಲ್ದಾರರ ಕಛೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.