ವಿಜಯಪುರ ನಗರದಲ್ಲಿ ಗುರು ವಂದನಾ ಕಾರ್ಯಕ್ರಮವನ್ನು ಭಾನುವಾರ ಮಧ್ಯಾನ 1ಗಂಟೆ ಜಗದ್ಗುರು ಕೊಟ್ಟೂರು ಬಸವಲಿಂಗ ಸ್ವಾಮಿಗಳು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿ ಶಿಷ್ಯರು ಗುರುವಿನ ಗುಲಾಮನಾದಾಗ ಮಾತ್ರ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ. ಪ್ರತಿಯೊಬ್ಬ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಕೆಲಸ ಗುರುಗಳು ಮಾಡುತ್ತಾರೆ. ಜಗತ್ತಿನಲ್ಲಿ ಶಿಕ್ಷಕ ವೃತ್ತಿ ಶ್ರೇಷ್ಠ ವೃತ್ತಿ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಮಠಾಧೀಶರು ಭಕ್ತಾದಿಗಳು ಸಾರ್ವಜನಿಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗಿಯಾಗಿದ್ದರು.