ಶುಕ್ರವಾರ ಮಧ್ಯಾಹ್ನ 1ಕ್ಕೆ ಬಾಡ ಶಿವಾಜಿ ಪ್ರೌಢ ಶಾಲಾ ಸಭಾಭವನದಲ್ಲಿ ನಡೆದ ಶಿಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೇಕರ್ ಉದ್ಘಾಟಿಸಿ ಪ್ರತಿಯೊಬ್ಬ ವ್ಯಕ್ತಿಯೂ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಹಾಗೂ ಸಮಾಜದಲ್ಲಿ ಉತ್ತಮ ಜೀವನ ಸಾಗಿಸುವಲ್ಲಿ ಶಿಕ್ಷಕರು ನೀಡುವ ಶಿಕ್ಷಣ ಪ್ರಮುಖ ಕಾರಣವಾಗಲಿದ್ದು, ವ್ಯಕ್ತಿಯ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರವಾದುದು ಎಂದರು. ಅಧ್ಯಕ್ಷತೆಯನ್ನು ನಗರಸಭೆ ಸದಸ್ಯ ಪಾಂಡುರಂಗ ವಹಿಸಿದ್ದರು. ಶಿಕ್ಷಣೆ ಇಲಾಖೆ ಅಧಿಕಾರಿಗಳು ಇದ್ದರು.