ಪ್ರೀತಿಯನ್ನ ನಿರಾಕರಿಸಿದ ಕಾರಣಕ್ಕೆ ಪ್ರೇಯಸಿಯ ಮೇಲೆ ಚಾಕುವಿನಿಂದ ಮನಸೋ ಇಚ್ಛೆ ಹಲ್ಲೇ ನಡೆಸಿ ಎಸ್ಕೇಪ್ ಆಗಿದ್ದ ಭಗ್ನ ಪ್ರೇಮಿಯನ್ನು ಅರೆಸ್ಟ್ ಮಾಡುವಲ್ಲಿ ಕಳಸ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ. ನಿನ್ನೆ ಕಳಸ ಪಟ್ಟಣದ ಖಾಸಗಿ ಆಸ್ಪತ್ರೆಯ ಬಳಿ ಈ ಘಟನೆ ನಡೆದಿತ್ತು. ಖಾಸಗಿ ಆಸ್ಪತ್ರೆಯಲ್ಲೊ ಲ್ಯಾಬ್ ಟೆಕ್ನೀಷಿಯನ್ ಆಗಿದ್ದ ಕಾವ್ಯ ಮೇಲೆ ಕೊಪ್ಪ ತಾಲೂಕಿನ ಜಯಪುರ ನಿವಾಸಿ 24 ವರ್ಷದ ಮೋಹನ್ ಚಾಕುವಿನಿಂದ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ. ಕೊಟ್ಟಿಗೆಹಾರದಲ್ಲಿ ಮೋಹನ್ ನನ್ನ ಕಳಸ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.