ಪಾಂಡವಪುರ ಪಟ್ಟಣದಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಳವಾಗಿದ್ದು ಇದರಿಂದ ಸಾರ್ವಜನಿಕರು ಭಯಭೀತರಾಗಿ ಪುರಸಭೆ ಇಲಾಖೆಗೆ ನಾಯಿಗಳನ್ನು ನಿಯಂತ್ರಣಗೊಳಿಸುವಂತೆ ಮನವಿ ಮಾಡಿದ್ದಾರೆ. ಮನವಿಯ ಮೇರೆಗೆ ಪುರಸಭೆ ಅಧಿಕಾರಿಗಳು ನಾಯಿಗಳ ನಿಯಂತ್ರಣಕ್ಕೆ ಸಂತಾನಹರಣ ಚಿಕಿತ್ಸೆಗೆ ಮುಂದಾಗಿದೆ. ಪಾಂಡವಪುರ ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಅವುಗಳನ್ನು ಹಿಡಿದು ಸಂತಾನಹರಣ ಶಸ್ತ್ರಚಿಕಿತ್ಸೆ ನಡೆಸಲು ಪುರಸಭೆ ಕ್ರಮ ಕೈಗೊಂಡಿದೆ. ಕೇಂದ್ರ ಸರ್ಕಾರದ ಆದೇಶದಂತೆ, ಈ ಕಾರ್ಯಕ್ಕಾಗಿ ಇ-ಪ್ರೊಕ್ಯೂರ್ ಮೆಂಟ್ ಟೆಂಡರ್ ಕರೆಯಲಾಗಿದೆ. ಆಸಕ್ತ ಗುತ್ತಿಗೆದಾರರು, ಏಜೆನ್ಸಿಗಳು ಅಥವಾ ಎನ್ ಜಿ ಒಗಳು ಟೆಂಡರ್ ನಲ್ಲಿ ಭಾಗವಹಿಸಬಹುದು ಎಂದು ಮಂಗಳವಾರ ಸಂಜೆ 5 ಗಂಟೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಸತೀಶ್ಕುಮಾರ್ ತಿಳಿಸಿದ್ದ