ಕೊಳೆತ ಹಾಗೂ ಅರೆ ಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಮಜ್ಜಿಗೆನಹಳ್ಳಿ ಗ್ರಾಮದ ಬಳಿ ಬುಧವಾರ ನಡೆದಿದೆ. ಭದ್ರಾವತಿಯ ಅನ್ವರ್ ಕಾಲೋನಿಯ ಸೈಯದ್ ನಸ್ರುಲ್ಲಾ ಎಂಬುವರಿಗೆ ಸೇರಿದ ತೋಟದ ಪಕ್ಕದಲ್ಲಿ ಇರುವಂತ ನೀರಿನ ಕಾಲುವೆಯಲ್ಲಿ ಸುಮಾರು 25ರಿಂದ 30 ವರ್ಷ ವಯಸ್ಸಿನ ಅಪರಿಚಿತ ಮಹಿಳೆಯ ಶವ ಕೊಳೆತ ಹಾಗೂ ಅರೆ ಬೆತ್ತಲೆ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ವಿಷಯ ತಿಳಿದ ಕೂಡಲೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.ಭದ್ರಾವತಿ ಗ್ರಾಮಾಂತ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.