ಹುಬ್ಬಳ್ಳಿ:ಹಳೇ ಹುಬ್ಬಳ್ಳಿಯ ನೇಕಾರನಗರದ ನೇತಾಜಿ ಕಾಲೋನಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಇಬ್ಬರು ವ್ಯಕ್ತಿಗಳು ಇನ್ನೊಬ್ಬ ವ್ಯಕ್ತಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಪ್ರಕರಣ ಕಸಬಾಪೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ. ಮಾರುತಿ ಗಾಯಕವಾಡ ಎಂಬುವರಿಗೆ ದೀಪಕ ಹಾಗೂ ಪ್ರಜ್ವಲ್ ಎಂಬುವರು ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ. ಮಾರುತಿ ಮನೆಯ ಮುಂದೆ ನಿಲ್ಲಿಸಿದ ಕಾರಿಗೆ ದೀಪಕ ಹಾಗೂ ಪ್ರಜ್ವಲ್ ಕಲ್ಲೆ ಎಸೆದಿದ್ದಾರೆ. ಅದನ್ನು ಪ್ರಶ್ನಿಸಿದ ಮಾರುತಿಗೆ ಚಾಕುವಿನಿಂದ ಇರಿಯಲು ಮುಂದಾಗಿದ್ದಾರೆ. ಅಷ್ಟೇ ಅಲ್ಲದೇ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.