ರೈತ ಚಳುವಳಿಗಾರರ ಕುರಿತು ಅವಹೇಳನವಾಗುವ ರೀತಿ ನಡೆದುಕೊಂಡಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರೈತರ ಕ್ಷಮೆ ಕೇಳಬೇಕೆಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಇತ್ತೀಚೆಗೆ ಬೆಂಗಳೂರಿನಲ್ಲಿ ರೈತರ ಭೂಸ್ವಾಧೀನ ಪ್ರಕ್ರಿಯೆ ವಿರುದ್ದ ರೈತ ಸಂಘಟನೆಗಳು ಪ್ರತಿಭಟನೆ ಮಾಡುತ್ತಿದ್ದ ಸ್ಥಳಕ್ಕೆ ಭೇಟಿ ನೀಡಿದ್ದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರೈತರ ಜತೆ ಅನುಚಿತವಾಗಿ ವರ್ತಿಸಿದ್ದಾರೆ.