ಸೆ.16 ರಂದು 21 ನೇ ದಿನದ ಹಿಂದೂ ಮಹಾ ಸಭಾ ಗಣಪತಿ ವಿಸರ್ಜನೆ ಪ್ರಯುಕ್ತ ಸೆ.12 ರ ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಜಿಲ್ಲಾ ಪೊಲೀಸ್ ಇಲಾಖೆ ರಾಯಚೂರು ನಗರದ ಪ್ರಮುಖ ರಸ್ತೆಗಳಲ್ಲಿ ರೂಟ್ ಮಾರ್ಚ್ ನಡೆಸಲಾಯಿತು. ಹಿಂದೂ ಮಹಾಸಭಾ ವತಿಯಿಂದ ಗಣಪತಿ ವಿಸರ್ಜನೆಯ ಅಂಗವಾಗಿ ನಡೆಯಲಿರುವ ಬೃಹತ್ ಮೆರವಣಿಗೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮತ್ತು ಕಿಡಿಗೇಡಿಗಳು ಈ ಸಂದರ್ಭದಲ್ಲಿ ಶಾಂತಿಗೆ ಭಂಗ ಉಂಟು ಮಾಡದಂತೆ ಮುಂಜಾಗ್ರತಾ ದೃಷ್ಟಿಯಿಂದ ರೂಟ್ ಮಾರ್ಚ್ ಮಾಡಿ ಸಾರವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.