ಉಸುಕು ತುಂಬಿಕೊಂಡು ಹೋಗುತ್ತಿದ್ದ ಟಿಪ್ಪರ್ ಲಾರಿ ವಾಹನ ರಸ್ತೆ ಡ್ರೈನೇಜ್ ತಗ್ಗಿನಲ್ಲಿ ಸಿಲುಕಿಕೊಂಡ ಘಟನೆ ಧಾರವಾಡದ ಟಿಕಾರೆ ರಸ್ತೆಯ ಬಳಿಯಲ್ಲಿ ನಡೆದಿದೆ. ಸೋಮವಾರ ರಾತ್ರಿ 8 ಗಂಟೆಗೆ ಈ ಘಟನೆ ನಡೆದಿದ್ದು, ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಸಂಚಾರಿ ಪೊಲೀಸರು ವಾಹನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.