Download Now Banner

This browser does not support the video element.

ಚಿತ್ರದುರ್ಗ: ಜಿಲ್ಲೆಯಾದ್ಯಂತ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಮೆರವಣಿಗೆಯ ಸಂದರ್ಭದಲ್ಲಿ ಪಟಾಕಿ ಸಿಡಿಮದ್ದುಗಳ ನಿಷೇಧ:ಡಿಸಿ ವೆಂಕಟೇಶ್ ಆದೇಶ

Chitradurga, Chitradurga | Sep 4, 2025
ಚಿತ್ರದುರ್ಗ:-ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆ ಪೂರ್ಣಗೊಳ್ಳುವವರೆಗೂ ಜಿಲ್ಲೆಯಾದ್ಯಂತ ಎಲ್ಲ ತರಹದ ಕಲರ್ ಪೇಪರ್ ಬ್ಲಾಸ್ಟಿಂಗ್, ಪಟಾಕಿ, ಸಿಡಿಮದ್ದು ಸಿಡಿಸುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ. ಜಿಲ್ಲೆಯಲ್ಲಿ ಕಳೆದ ಆಗಸ್ಟ್ 27ರಂದು ಹಿಂದೂ ಬಾಂಧವರು ಒಟ್ಟು 1,744 ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದು, ವಿವಿಧ ದಿನಾಂಕಗಳಂದು ವಿಸರ್ಜನೆ ಮಾಡಲಿದ್ದಾರೆ. ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ಮೆರವಣಿಗೆ ಮೂಲಕ ವಿಸರ್ಜನೆ ನಡೆಸಲಿದ್ದಾರೆ ಹಾಗೂ ಸೆ.05 ರಂದು ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು “ಈದ್ ಮಿಲಾದ್” ಹಬ್ಬವನ್ನು ಆಚರಿಸಲಿದ್ದಾರೆ.
Read More News
T & CPrivacy PolicyContact Us