ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಗುಂಡಿ ಮುಕ್ತ ರಸ್ತೆ ನಿರ್ಮಿಸುವ ಉದ್ದೇಶದಿಂದ, ಪದೇಪದೇ ರಸ್ತೆ ಗುಂಡಿಗಳಾಗದಂತೆ ವೈಜ್ಞಾನಿಕವಾಗಿ ಗುಂಡಿಗಳನ್ನು ಮುಚ್ಚಲು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಆಯುಕ್ತ ಕೆ.ಎನ್.ರಮೇಶ್ ಸೂಚಿಸಿದರು.ಸೆಪ್ಟೆಂಬರ್ 8ರಂದು ಸಂಜೆ 4 ಗಂಟೆಗೆ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಕಛೇರಿಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿ ರಸ್ತೆ ಇಕ್ಕೆಲಗಳಲ್ಲಿನ ತ್ಯಾಜ್ಯ ಹಾಗೂ ಕಟ್ಟಡ ಭಗ್ನಾವಶೇಷಗಳನ್ನು ತೆರವುಗೊಳಿಸಿ, ಸ್ವಚ್ಛತೆ ಕಾಪಾಡಲು ಅಗತ್ಯವಿರುವ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಿದರು.ಈ ವೇಳೆ ಜಂಟಿ ಆಯುಕ್ತರು, ಉಪ ಆಯುಕ್ತರು, ಮುಖ್ಯ ಅಭಿಯಂತರರು ಸೇರಿದಂತೆ ಇತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.