ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ: ಮೊಹಮ್ಮದ್ ಅನೀಫ್ ಕೋಲಾರ : ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರವು (ಕುಡಾ) ವಸತಿ ಯೋಜನೆಗಾಗಿ ಬಹಳ ವರ್ಷಗಳ ನಂತರ ಹೊಸ ಬಡಾವಣೆ ನಿರ್ಮಾಣಕ್ಕೆ ಪ್ರಯತ್ನ ಹಾಕುತ್ತಿದ್ದು, ಸಾರ್ವಜನಿಕರಿಂದ ನಿವೇಶನಗಳಿಗೆ ಬೇಡಿಕೆ ಇರುವ ಕಾರಣ ಕಡಿಮೆ ದರದಲ್ಲಿ ನಿವೇಶನ ಹಂಚಿಕೆ ಮಾಡುವ ಸಂಬಂಧ ವಸತಿ ಬಡಾವಣೆ ಯೋಜನೆ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ ಎಂದು ಕುಡಾ ಅಧ್ಯಕ್ಷ ಮೊಹಮ್ಮದ್ ಅನೀಫ್ ತಿಳಿಸಿದರು. ಶುಕ್ರವಾರ ತಮ್ಮ ಕಚೇರಿಯಲ್ಲಿ ಸಾಮಾನ್ಯ ಸಭೆ ನಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಾಧಿಕಾರವು ಜಂಟಿ ಯೋಜನೆಗೆ ಮುಂದಾಗಿದೆ. ಭೂಮಾಲೀಕರ ಸಹಭಾಗಿತ್ವದಲ್ಲಿ ೫೦:೫೦ ಅನುಪಾತದ ಒ