ಒಗ್ಗೂಡಲು ಮಡಿವಾಳ ಸಮಾಜಕ್ಕೆ ಡಾ.ಶ್ರೀ ಬಸವ ಮಾಚಿದೇವ ಸ್ವಾಮೀಜಿ ಕರೆ ಆಧುನಿಕ ತಂತ್ರಜ್ಞಾನ ಯುಗದಲ್ಲಿಯೂ ಮಡಿವಾಳ ಸಮುದಾಯದವರು ಹಿಂದುಳಿದಿದ್ದಾರೆ. ಆದ್ದರಿಂದ, ಬಡತನದ ಸಂಕೋಲೆಯಿಂದ ಹೊರ ಬಂದು ಸುಂದರ ಬದುಕು ರೂಪಿಸಿಕೊಳ್ಳಬೇಕು. ಇದು ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಚಿತ್ರದುರ್ಗದ ಶ್ರೀ ಮಾಚಿದೇವ ಮಹಾಸಂಸ್ಥಾನ ಮಠದ ಪೀಠಾಧಿಪತಿ ಡಾ.ಶ್ರೀ ಬಸವ ಮಾಚಿದೇವ ಸ್ವಾಮೀಜಿ ಕರೆ ನೀಡಿದರು. ಕೋಲಾರ ನಗರದ ಡೋಬಿಘಾಟ್ ನಲ್ಲಿ ಮಂಗಳವಾರ ಮಧ್ಯಾಹ್ನ 2 ಗಂಟೆಯಲ್ಲಿ ಮಡಿವಾಳ ಸಮಾಜದ ಜಿಲ್ಲಾ ಘಟಕ ನೇತೃತ್ವದಲ್ಲಿ ನಡೆದ ಮನ ಮನೆಗೆ ಮಾಚಿದೇವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.