ಗೌರಿಬಿದನೂರು ನಗರದ ಬೈಪಾಸ್ ಗಣೇಶೋತ್ಸವ ಸಮಿತಿಯ 22ನೇ ವಾರ್ಷಿಕೋತ್ಸವದ ಅಂಗವಾಗಿ ಪ್ರತಿಷ್ಠಾಪಿಸಿರುವ ಶ್ರೀ ಪ್ರಣವ ರುದ್ರ ಗಣಪತಿ ವಿಸರ್ಜನೆಯ ಕಾರ್ಯಕ್ರಮವನ್ನು ಸೆ.14 ರಂದು ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಎಸ್ಪಿ ಕುಶಾಲ್ ಚೌಕ್ಸೆ ನೇತೃತ್ವದಲ್ಲಿ ಬೈಪಾಸ್ ಗಣೇಶೋತ್ಸವ ಸಮಿತಿ ಹಾಗೂ ವಿವಿಧ ಸಮುದಾಯಗಳ ಮುಖಂಡರೊಂದಿಗೆ ಶಾಂತಿ ಸಬೆಯನ್ನು ಹಮ್ಮಿಕೊಳ್ಳಲಾಗಿತ್ತು.ಎಸ್ಪಿ ಕುಶಾಲ್ ಚೌಕ್ಸೆ ಮಾತನಾಡಿ ಗಣೇಶೋತ್ಸವ ಕಾರ್ಯಕ್ರಮಗಳು ಹಾಗೂ ವಿಸರ್ಜನೆ ಕಾರ್ಯಕ್ರಮಗಳು ಸೌಹಾರ್ಧತೆ ಮತ್ತು ಶಾಂತಿಯ ಸಂಕೇತವಾಗಿ ಇಡೀ ರಾಜ್ಯಕ್ಕೆ ಮಾದರಿಯಾಗಬೇಕು ಎಂದು ತಿಳಿಸಿದ ಅವರು ಗಣೇಶ ವಿಸರ್ಜನೆಯ ವೇಳೆ ಪೊಲೀಸ್ ಇಲಾಖೆ ಕೆಲವು ಕಟ್ಟುನಿಟ್ಟಿನ ನಿಯಮಗಳನ್ನು ತೆಗೆದುಕೊಳ್ಳಲಾಗಿದೆ.