ಯಾದಗಿರಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ ಸಂಜೆವರೆಗೆ ಜಿಲ್ಲಾ ಮಟ್ಟದ ಸಿಎಂ ದಸರಾ ಕ್ರೀಡಾಕೂಟವನ್ನು ನಡೆಸಲಾಯಿತು. ಬೆಳಗ್ಗೆ ನಡೆದ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶನಪುರ ಭಾಗವಹಿಸಿ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್, ನಗರೆ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಕಾಡ್ಲೂರು, ರಾಷ್ಟ್ರಮಟ್ಟದ ಜಾವೆಲಿಯನ್ ಕ್ರೀಡಾಪಟು ರೋಹಿತ್, ಕ್ರೀಡಾ ಇಲಾಖೆಯ ಸಾಯಕ ನಿರ್ದೇಶಕ ರಾಜು ಬಾವಿಹಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.