ಹರಿಕಾರ ಮೊಹಮ್ಮದ್ ಪೈಗಂಬರ್ ಶೀರ್ಷಿಕೆ ಅಡಿ ಸೆಪ್ಟೆಂಬರ್ 3ರಿಂದ 14ರವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನವನ್ನ ಹಮ್ಮಿಕೊಳ್ಳಲಾಗಿದೆ ಎಂದು ಶಿವಮೊಗ್ಗ ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಸಂಚಾಲಕ ಮಹಮದ್ ಇಲಿಯಾಸ್ ತಿಳಿಸಿದರು. ಬಳಿಕ ಮಾತನಾಡಿದ ಅವರು ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ ನ್ಯಾಯ ಮತ್ತು ಮಾನವೀಯತೆಯ ಸಂದೇಶಗಳನ್ನ ನಾಡಿನ ಜನತೆಗೆ ತಲುಪಿಸುವುದು ಮತ್ತು ಪ್ರವಾದಿಯವರ ಬಗೆಗಿನ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವುದು ಹಾಗೂ ವಿವಿಧ ಧರ್ಮೀಯರ ನಡುವೆ ಪರಸ್ಪರ ಸಂಬಂಧಗಳನ್ನ ಬಲಪಡಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.