ಕಲಬುರಗಿ : ಕಲಬುರಗಿ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಅತಿವೃಷ್ಟಿಯಿಂದ ಸಾಕಷ್ಟು ಪ್ರಮಾಣದಲ್ಲಿ ಬೆಳೆಹಾನಿಯಾಗಿದ್ದು, ಬೆಳೆಹಾನಿ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲು ಬೆಂಗಳೂರಿನಲ್ಲಿ ಸೆ1 ರಂದು ಮಧ್ಯಾನ 1 ಗಂಟೆಗೆ ಕಲಬುರಗಿ ಸಂಸದ ಹಾಗೂ ಕಾಂಗ್ರೆಸ್ ಶಾಸಕರೊಟ್ಟಿಗೆ ಸಚಿವ ಪ್ರಿಯಾಂಕ್ ಖರ್ಗೆ ಮಹತ್ವದ ಸಭೆ ನಡೆಸಿದ್ದಾರೆ.. ಜಿಲ್ಲೆಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗಿ ಬೆಳೆ ಹಾನಿಯಾಗಿದೆ. ಬೆಳೆ ಹಾನಿ ಬಗ್ಗೆ ಕೃಷಿ ಇಲಾಖೆ ಸರ್ವೆ ನಡೆಸುತ್ತಿದ್ದು, ಜಿಲ್ಲಾಧಿಕಾರಿಗಳ ವರದಿಗಾಗಿ ಕಾಯುತ್ತಿರೋದಾಗಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.