ದೇಶದಲ್ಲಿ ಹಾಗೂ ರಾಜ್ಯದಲ್ಲಿ ಹಿಂದೂ ಧರ್ಮವನ್ನು ತಡೆಯುವ ಶಕ್ತಿಗೆ ಎಂದಿಗೂ ಯಶಸ್ಸು ಸಿಗುವುದಿಲ್ಲ” ಎಂದು ರಾಜ್ಯ ಬಿಜೆಪಿ ವಕ್ತಾರ ಚಂದ್ರಶೇಖರ್ ಹೇಳಿದ್ದಾರೆ. ಮಧುಗಿರಿ ಪಟ್ಟಣದಲ್ಲಿ ಶನಿವಾರ ಸಂಜೆ 5 ಗಂಟೆಯಲ್ಲಿ ಬಿಜೆಪಿ ಹಾಗೂ ಧರ್ಮಸ್ಥಳ ಸಂಘದ ಮಹಿಳಾ ಸದಸ್ಯರೊಂದಿಗೆ ನಡೆದ ಧರ್ಮ ಉಳಿಸಿ ಪ್ರತಿಭಟನಾ ಮೆರವಣಿಗೆಯಲ್ಲಿ ಮಾತನಾಡಿದ ಅವರು, “ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಿಂದ ಹಿಂದೂ ಸಮಾಜ ಸಂಘಟಿತವಾಗುತ್ತಿದೆ. ಇದರಿಂದ ಕಾಂಗ್ರೆಸ್‌ಗೆ ಉಳಿಗಾಲವಿಲ್ಲ. ಜಿಹಾದಿಗಳು ಮತ್ತು ಮತಾಂತರಿಗಳ ಕುಮ್ಮಕ್ಕಿನಿಂದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ, ಆದರೆ ಸತ್ಯವೇ ಗೆಲ್ಲುತ್ತದೆ” ಎಂದು ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಮಂಡಲಾಧ್ಯಕ್ಷ ಹನುಮಂತರೆಡ್ಡಿ, “