ಬೀದರ್:: ಕರ್ನಾಟಕ ರೆಡ್ಡಿಜನ ಸಂಘವು 100ನೇ ವಸಂತಕ್ಕೆ ಕಾಲಿಡುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 24 ರಂದು ಬೆಳಿಗ್ಗೆ 10 ಗಂಟೆಗೆ ಕರ್ನಾಟಕ ರೆಡ್ಡಿಜನ ಸಂಘ ಶತಮಾನೋತ್ಸವ ಕಾರ್ಯಕ್ರಮವನ್ನು ಬೆಂಗಳೂರಿನ ಗಾಯತ್ರಿ ವಿಹಾರ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಎರೆಹೊಸಹಳ್ಳಿಯ ರೆಡ್ಡಿ ಗುರುಪೀಠದ ವೇಮನಾನಂದ ಸ್ವಾಮೀಜಿ ತಿಳಿಸಿದರು. ಶನಿವಾರ ಮಧ್ಯಾಹ್ನ 1 ಗಂಟೆಗೆ ನಗರದ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು,