ಬೀದರ್: ಪರಿಶಿಷ್ಟರಿಗೆ ಒಳ ಮೀಸಲು ಕಲ್ಪಿಸಲು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‍ದಾಸ್ ಆಯೋಗ ಸಲ್ಲಿಸಿರುವ ವರದಿಯಲ್ಲಿ ಸ್ಪರ್ಶ ಹಾಗೂ ಅಸ್ಪøಶ್ಯ ಪದ ಬಳಸಿರುವುದಕ್ಕೆ ಆಲ್ ಇಂಡಿಯಾ ಬಂಜಾರ ಸೇವಾ ಸಂಘ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ನಗರದಲ್ಲಿ ಶನಿವಾರ ಮಧ್ಯಾಹ್ನ 1 ಗಂಟೆಗೆ ನಿಯೋಗದಲ್ಲಿ ಈ ಕುರಿತು ಮುಖ್ಯಮಂತ್ರಿಗೆ ಬರೆದ ಮನವಿಪತ್ರವನ್ನು ಜಿಲ್ಲಾಧಿಕಾರಿ ಕಚೇರಿ ಅಧಿಕಾರಿಗೆ ಸಲ್ಲಿಸಿದರು.