ಜಗಳೂರು ತಾಲ್ಲೂಕು ಕ್ರೀಡಾಂಗಣವನ್ನು 2 ಕೋಟಿ ರೂ ವೆಚ್ಚದಲ್ಲಿ ಅಭಿವೃದ್ದಿಪಡಿಸಲಾಗುವುದು ಎಂದು ಶಾಸಕ ಬಿ.ದೇವೇಂದ್ರಪ್ಪ ಭರವಸೆ ನೀಡಿದರು. ಬುಧವಾರ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಹಂತದ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಾಜಿ ಶಾಸಕ ಟಿ.ಗುರುಸಿದ್ದನಗೌಡ್ರು ಅವರ ಆಡಳಿತಾವಧಿಯಲ್ಲಿ ಪಟ್ಟಣದ ಸುಸಜ್ಜಿತವಾದ ಕ್ರೀಡಾಂಗಣವನ್ನು ನಿರ್ಮಿಸಲಾಗಿದ್ದು, ಪ್ರಥಮ ಬಾರಿಗೆ ತಾಲ್ಲೂಕು ಮಟ್ಟದ ಕ್ರೀಡಾಕೂಟ ನಡೆಯುತ್ತಿರುವುದು ಸಂತಸ ತಂದಿದೆ. ಶೀಘ್ರದಲ್ಲಿ ಅಧಿಕಾರಿಗಳೊಂದಿಗೆ ಚರ್ಚಿಸಿ ಅಗತ್ಯ ಮೂಲಸೌಕರ್ಯ ಒದಗಿಸಲಾಗುವುದು ಇದೀಗ ಯುವಜನ ಸಬಲೀಕರಣ, ಕ್ರೀಡಾ ಇಲಾಖೆಯಿಂದ 2 ಕೋ ರೂ ಅನುದಾನ ಮೀಸಲಿಡಲಾಗಿದೆ ಎಂದರು