ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕಂದಾಯ ಸಚಿವರು ಹಾಗೂ ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣಭೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಸಾರ್ವಜನಿಕರ ಕುಂದು ಕೊರತೆಗಳನ್ನು ಆಲಿಸುವ ಸಭೆ ನಡೆಯಿತು. ಸಭೆಯಲ್ಲಿ ಸಾವಿರಾರು ಸಂಖ್ಯೆಯ ಜನರು ಭಾಗವಹಿಸಿ ಸಚಿವರಿಗೆ ತಮ್ಮ ಅಹವಾಲುಗಳನ್ನು ನೀಡಿದರು, ಆರೋಗ್ಯ ಇಲಾಖೆ, ಕೃಷಿ ಇಲಾಖೆ, ತೋಟಗಾರಿಕೆ, ಗ್ರಾಮ ಪಂಚಾಯತ್, ಪೆನ್ಶನ್, ಹೀಗೆ ಹತ್ತು ಹಲವು ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನವಿ ನೀಡಿದರು. ಸಭೆಯಲ್ಲಿ ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳಿದ್ದು ಜನರಿಂದ ಬಂದ ಸಮಸ್ಯೆಗಳ ಅರ್ಜಿಗಳಿಗೆ ಸ್ಥಳದಲ್ಲೇ ಉತ್ತರಿಸಿ ಅಲ್ಲೇ ಬಗೆಹರುವ ಮೂಲಕ ಸಾರ್ವಜನಿಕರ ಮೆಚ್ಚುಗೆಗೆ ಸಚಿವ ಕೃಷ್ಣ ಬೈರೇಗೌಡ ಪಾತ್ರರಾದರು.