ಯಾದಗಿರಿ ಜಿಲ್ಲೆಯ ಗುರುಮಠಕಲ್ ಪಟ್ಟಣದಲ್ಲಿ ಭಾನುವಾರ ಬೆಳಗ್ಗೆ ಪ್ರಜಾಸೌಧ ಕಟ್ಟಡದ ಅಡಿಗಲು ಸಮಾರಂಭ ಕಾರ್ಯಕ್ರಮದ ಸಮಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಮಧ್ಯೆ ಪರಸ್ಪರ ವಾಗ್ವಾದ ನಡೆದಿತ್ತು. ಘಟನೆಯನ್ನು ಖಂಡಿಸಿ ಭಾನುವಾರ ಮಧ್ಯಾನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಘಟನೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಶರಣಪ್ಪ ಮನೆಗರ್ ಸುದ್ದಿಗೋಷ್ಠಿ ನಡೆಸಿ ಘಟನೆಯನ್ನು ಖಂಡಿಸಿದರು.