ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಸಾರ್ವಜನಿಕರಲ್ಲಿ ವಿಶ್ವಾಸವನ್ನ ತುಂಬಲು ಪೊಲೀಸ್ ಪಡೆಯ ಸನ್ನದ್ಧತೆ ಪ್ರದರ್ಶಿಸಲು ಚಿಕ್ಕಮಗಳೂರು ನಗರದ ಬಸವನಹಳ್ಳಿ ಹಾಗೂ ನಗರ ಠಾಣೆಯ ವ್ಯಾಪ್ತಿಯಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಮತ್ತು ಕೆ ಎಸ್ ಆರ್ ಪಿ ತುಕಾಡಿಗಳೊಂದಿಗೆ ರೂಟ್ ಮಾರ್ಚ್ ನಡೆಸಲಾಯಿತು.