ಮದಕರಿ ಪುರ ಗ್ರಾಮದ ಬಳಿ ಅನಾಮಧೇಯ ವ್ಯಕ್ತಿ ಅಪಘಾತದಲ್ಲಿ ಮೃತಪಟ್ಟಿದ್ದು ಗುರುತು ಪತ್ತೆಗೆ ಪೊಲೀಸರು ಪ್ರಕಟಣೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ 11 ಗಂಟೆಗೆ ಈ ಬಗ್ಗೆ ಜಿಲ್ಲಾ ಪೊಲೀಸ್ ಇಲಾಖೆ ಮಾಹಿತಿ ನೀಡಿದೆ. ಇದೇ ಅಗಸ್ಟ್ 25 ರಂದು ಚಿತ್ರದುರ್ಗ ತಾಲ್ಲೂಕಿನ ಮದಕರಿಪುರ ಗ್ರಾಮದ ಹೊರವಲಯದ ಚಳ್ಳಕೆರೆ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ವ್ಯಕ್ತಿಯೊಬ್ಬ ಗಂಬೀರವಾಗಿ ಗಾಯಗೊಂಡು ಸ್ಥಳದಲ್ಲೆ ಮೃತಪಟ್ಟಿದ್ದು ನಾಲ್ಕು ದಿನ ಕಳೆದರು ಸಹ ಮೃತನ ಗುರುತು ಪತ್ತೆಯಾಗಿರುವುದಿಲ್ಲ.