ಚಿಂತಾಮಣಿ ತಾಲೂಕಿನ ಬಟ್ಲಹಳ್ಳಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ಆಂಬುಲೆನ್ಸ್ ಬಾರದಿದ್ದಕ್ಕೆ ಹನುಮಯ್ಯಗಾರಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ಹನುಮಯ್ಯಗಾರಹಳ್ಳಿ ವ್ಯಕ್ತಿಯೊಬ್ಬರಿಗೆ ಅಪಘಾತವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ನಗರಕ್ಕೆ ಹೋಗಲು ಆಂಬುಲೆನ್ಸ್ ಅವಶ್ಯಕತೆ ಇದ್ದು, ವೈಧ್ಯರನ್ನು ಪ್ರಶ್ನಿಸಿದ್ದಕ್ಕೆ ನಿರ್ಲಕ್ಷ್ಯ ರೀತಿಯಲ್ಲಿ ಉತ್ತರಿಸಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.