ಯಲ್ಲಾಪುರ: ಪಟ್ಟಣದ ಕಾಳಮ್ಮದೇವಿ ಸಭಾಭವನದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಜಯಂತಿ ಕಾರ್ಯಕ್ರಮ ವನ್ನು ಪಟ್ಟಣ ಪಂಚಾಯತ್ ಅಧ್ಯಕ್ಷೆ ನರ್ಮದಾ ನಾಯ್ಕ್ ಉದ್ಘಾಟಿಸಿ ಮಾತನಾಡಿದರು ,ಬ್ರಹ್ಮಶ್ರೀ ನಾರಾಯಣ ಗುರುಗಳು ಸಮಾಜದಲ್ಲಿರುವ ಅನಿಷ್ಟ ಪದ್ಧತಿಗಳನ್ನು ಹೋಗಲಾಡಿಸಲು ಶ್ರಮಿಸಿದರು.ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆಯೋಣ ಎಂದರು. ಗ್ರೇಡ್ -2 ತಹಶೀಲ್ದಾರಸಿ. ಜಿ ನಾಯ್ಕ್ ಶಿಕ್ಷಕ ರಾಮಚಂದ್ರ ನಾಯ್ಕ್ ನಾಮಧಾರಿ ಸಂಘದ ಅಧ್ಯಕ್ಷ ನರಸಿಂಹ ನಾಯ್ಕ,ಪ ಪಂ ಸದಸ್ಯ ಸತೀಶ ನಾಯ್ಕ,ಶಿಕ್ಷಕಿ ಸತ್ಯಭಾಮಾ ನಾಯ್ಕ,ಇತರರು ಇದ್ದರು.