ರಾಮನಗರ -- ವಿಶ್ವ ಪ್ರವಾಸೋದ್ಯಮ ದಿನಾಚರಣೆ ಪ್ರಯುಕ್ತ ನಗರದ ರಂಗರಾಯರ ದೊಡ್ಡಿ ಕೆರೆಯಲ್ಲಿ ದೋಣಿ ವಿಹಾರಕ್ಕೆ ಶಾಸಕರಾದ ಎಚ್.ಎ. ಇಕ್ಬಾಲ್ ಹುಸೇನ್, ಶನಿವಾರ ಚಾಲನೆ ನೀಡಿದರು. ವಿಶ್ವ ಪ್ರವಾಸೋಧ್ಯಮ ದಿನದ ಅಂಗವಾಗಿ ಬೋಟಿಂಗ್, ವಾಟರ್ ರೈಡಿಂಗ್ ಗೇಮ್ಸ್ ನಗರ ಜನತೆಯ ಪಾಲಿಗೆ ಇದೊಂದು ಐತಿಹಾಸಿಕ ದಿನ. ಜಲ ಕ್ರೀಡೆಗಳ ಅನುಭವ ಪಡೆಯಲು ನಮ್ಮ ಜಿಲ್ಲೆ ಸೇರಿದಂತೆ ಸುತ್ತಮುತ್ತ ಯಾವ ಜಿಲ್ಲೆಯಲ್ಲೂ ಇಂತಹ ಅವಕಾಶ ಇರಲಿಲ್ಲ. ಇದೀಗ ಪ್ರವಾಸೋದ್ಯಮ ಅಭಿವೃದ್ಧಿಯ ದೂರದೃಷ್ಟಿ ಇಟ್ಟುಕೊಂಡು ಆಯ್ದ ಕೆರೆಗಳಲ್ಲಿ ಪ್ರವಾಸಿಗರ ಮನರಂಜನೆಗೆ ಅವಕಾಶ ಮಾಡಿಕೊಡಲಾಗಿದೆ ಎಂದರು. ರಾಮನಗರದ