ಹುಬ್ಬಳ್ಳಿ: ಹುಬ್ಬಳ್ಳಿಯ ಗಾರ್ಡನ್ ಪೇಟೆ ಅಬ್ಬಾ ಸಲಿ ಚೌಕ ಬಳಿ ನಿರಂತರ ಮಳೆಯಿಂದಾಗಿ ಮುಮ್ತಾಜ್ ವಡ್ಡು ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದು ಬಿದ್ದಿದೆ. ಈ ಘಟನೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ ಅದೃಷ್ಟವಶಾತ್ ಮನೆಯಲ್ಲಿದ್ದ ೭ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯ ಗೋಡೆ ಕುಸಿಯುತ್ತಿದ್ದಂತೆ ಹೊರಬಂದಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ.