ದಸರಾ ಕ್ರೀಡಾಕೂಟದಲ್ಲಿ ಯುವಕರು ಸಾಕಷ್ಟು ಸಂಖ್ಯೆಯಲ್ಲಿ ಭಾಗವಹಿಸದೇ ಇರುವ ಹಿನ್ನಲೆಯಲ್ಲಿ ಕ್ರೀಡಾ ಆಯೋಜಕರನ್ನು ಶಾಸಕ ಡಾ.ಚಂದ್ರು ಲಮಾಣಿ ಅವರು ತರಾಟೆಗೆ ತೆಗೆದುಕೊಂಡರು. ದಸರಾ ಕ್ರೀಡಾಕೂಟದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಯುವ ಕ್ರೀಡಾಪಟುಗಳು ಭಾಗವಹಿಸಬೇಕಾಗಿತ್ತು. ಆದರೆ ತಾಲೂಕಿನ ಕ್ರೀಡಾ ಇಲಾಖೆಯ ಅಧಿಕಾರಿಗಳು ಸರಿಯಾದ ರೀತಿಯಲ್ಲಿ ಪ್ರಚಾರ ಮತ್ತು ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕೇವಲ ಬೆರಳೆಣಿಕೆಯಷ್ಟು ಕ್ರೀಡಾಪಟುಗಳು ಆಗಮಿಸಿದ್ದಕ್ಕೆ ಅವರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.