ಬಾಗಲಕೋಟ ಜಿಲ್ಲೆಯ ಇಳಕಲ್ ತಾಲೂಕಿನ ವಡಗೇರಿ ಗ್ರಾಮದಲ್ಲಿ ದುರ್ಗಾದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಹೊನಲು ಬೆಳಕಿನ ಕಬ್ಬಡ್ಡಿ ಪಂದ್ಯಾವಳಿಯನ್ನು ವೀರಶೈವ ಲಿಂಗಾಯತ ಅಭಿವೃದ್ಧಿ ನಿಮಗದ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ ಅ.೦೧ ಬುಧವಾರ 05 ಗಂಟೆಗೆ ಚಾಲನೆ ನೀಡಿದರು. ಯುವಕರು ದುಶ್ಚಟಗಳಿಗೆ ಬಲಿಯಾಗದೇ ದೇಶಿ ಕ್ರೀಡೆಗಳಲ್ಲಿ ಪಾಲ್ಗೊಂಡು ದೇಹವನ್ನು ಸದೃಢವಾಗಿಟ್ಟುಕೊಳ್ಳಬೇಕು ಎಂದು ಕರೆ ಕೊಟ್ಟರು. ಸಾನಿಧ್ಯವನ್ನು ಸಿದ್ದನಕೊಳ್ಳದ ಡಾ.ಶಿವಕುಮಾರ ಶ್ರೀಗಳು ವಹಿಸಿದ್ದರು. ಕಾರ್ಯಕ್ರಮದಲ್ಲಿ ಗ್ರಾಮದ ಮುಖಂಡರು, ದುರ್ಗಾದೇವಿ ಜಾತ್ರಾ ಮಹೋತ್ಸವದ ಪದಾಧಿಕಾರಿಗಳು ಇದ್ದರು.