ಬಳ್ಳಾರಿ ಜಿಲ್ಲೆಯ ಜಿಲ್ಲಾಧಿಕಾರಿಯಾಗಿದ್ದ ಪ್ರಶಾಂತ್ ಕುಮಾರ್ ಮಿಶ್ರ ಅವರು ಪ್ರವಾಸೋದ್ಯಮ ಇಲಾಖೆಗೆ ವರ್ಗಾವಣೆಗೊಂಡಿದ್ದು, ಅವರ ಸ್ಥಾನಕ್ಕೆ ನೂತನ ಡಿಸಿ ನಾಗೇಂದ್ರ ಪ್ರಸಾದ್ ಅವರು ಬುಧವಾರ ಸಂಜೆ6ಗಂಟೆಗೆ ಅಧಿಕಾರ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿಗಳು ಹೂವಿನ ಗುಚ್ಛ ನೀಡಿ ಸ್ವಾಗತ ಕೋರಿದರು. ಜಿಲ್ಲೆಯಲ್ಲಿ ಆದ್ಯತೆಯ ಮೇಲೆ ಏನೇನು ಕೆಲಸಗಳು ಆಗಬೇಕು ಎಂಬುದನ್ನು ತಿಳಿದುಕೊಂಡು ಅದರ ಪ್ರಕಾರ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗುವುದು ಎಂದು ಅಧಿಕಾರ ವಹಿಸಿಕೊಂಡ ಬಳಿಕ ಅವರು ತಿಳಿಸಿದರು