ಸುರಪುರ ತಾಲೂಕಿನ ಗೌಡಗೇರ ನಗನೂರ ಸೇರಿದಂತೆ ವಿವಿಧ ಗ್ರಾಮಗಳಿಗೆ ಸರಿಯಾದ ಬಸ್ ವ್ಯವಸ್ಥೆ ಇಲ್ಲದ್ದರಿಂದ ವಿದ್ಯಾರ್ಥಿಗಳು ಶಾಲಾ ಕಾಲೇಜಿಗೆ ಬರಲು ಹಾಗೂ ರೈತರು ಮತ್ತು ವಯೋವೃದ್ಧರು ಆಸ್ಪತ್ರೆ ಕಾರಣಗಳಿಗೆ ಸುರಪುರಕ್ಕೆ ಆಗಮಿಸಲು ತುಂಬಾ ತೊಂದರೆ ಪಡುವಂತಾಗಿದೆ. ಆದ್ದರಿಂದ ದಿನಾಲು ಬೆಳಗ್ಗೆ ಮತ್ತು ಸಾಯಂಕಾಲ ಮಾಲಗತ್ತಿ ಗೌಡಗೇರ ಮೂಲಕ ನಗನೂರ ವರೆಗೆ ಬಸ್ ಆರಂಭಿಸಬೇಕು ಇಲ್ಲದಿದ್ದಲ್ಲಿ ಜೆಡಿಎಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿ ಆಗ್ರಹಿಸಿದ್ದಾರೆ. ಈ ಸಂದರ್ಭದಲ್ಲಿ ಜೆಡಿಎಸ್ ಮುಖಂಡರಾದ ಶ್ರವಣಕುಮಾರ ನಾಯಕ, ಶಿವರಾಜ ಕಲಕೇರಿ ಸೇರಿದಂತೆ ಅನೇಕ ಮುಖಂಡರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.