ರಾಜ್ಯದಲ್ಲಿನ ಕ್ರೀಡಾಪಟುಗಳಿಗೆ ಸೂಕ್ತ ತರಬೇತಿ, ವಸತಿ ನಿಲಯ ವ್ಯವಸ್ಥೆ ಸೇರಿದಂತೆ ಅವರನ್ನು ಪ್ರೋತ್ಸಾಹಿಸಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಡಾ.ಬಾಬು ಜಗಜೀವನರಾಮ್ ಚರ್ಮ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಬಳ್ಳಾರಿ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಪರಿಶಿಷ್ಟ ಜಾತಿ ಒಳ ಮೀಸಲಾತಿ ಸಮೀಕ್ಷೆಯಿಂದ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಸ್ಥಗಿತಗೊಂಡಿದ್ದವು. ಮೀಸಲಾತಿ ವರ್ಗೀಕರಣದಿಂದ ಪ್ರಸ್ತುತದಿಂದ ಹುದ್ದೆಗಳ ನೇಮಕ ಚಾಲನೆಗೊಂಡಿದ್ದು, ರಾ