ಹಿಂದುಗಳ ಪವಿತ್ರ ಕ್ಷೇತ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಅವರ ಹೆಸರು ಹಾಳು ಮಾಡುತ್ತಿರುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದ ತಹಸಿಲ್ದಾರ್ ಕಚೇರಿ ಬಳಿ ಬಿಜೆಪಿ ಘಟಕದಿಂದ ಸೋಮವಾರ ಮಧ್ಯಾಹ್ನ 1.30ರ ವರೆಗೆ ಪ್ರತಿಭಟನೆ ನಡೆಸಲಾಯಿತು. ಧರ್ಮಸ್ಥಳ ಕ್ಷೇತ್ರದ ಹೆಸರು ಹಾಳು ಮಾಡುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪ್ರತಿಭಟನಾಕಾರರು, ಈ ಸಂದರ್ಭದಲ್ಲಿ ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ರೂಪಾಲಿ ನಾಯ್ಕ ಹಾಗೂ ಇನ್ನಿತರರು ಹಾಜರಿದ್ದರು.