ತಾಲೂಕಿನ ರಾಷ್ಟ್ರೀಯ ಹೆದ್ದಾರಿ 173 ರಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ ಮಂಗಳವಾರ ಮಧ್ಯಾಹ್ನ 2:30ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಬೈಕ್ ಸವಾರ ಮುಂದೆ ಹೋಗುತ್ತಿದ್ದ ಕಾರಿಗೆ ಗುದ್ದಿದ ಪರಿಣಾಮ ಸವಾರನ ಹೆಲ್ಮೆಟ್ ಕಾರಿನಲ್ಲಿ ಬಂದು ಬಿದ್ದಿದ್ದು ಹಿಂಬದಿಯ ಕಾರಿನ ಗ್ಲಾಸ್ ಪುಡಿ ಪುಡಿಯಾಗಿದೆ. ಪಿಕಪ್ ವಾಹನ ಕಾರು ಹಾಗೂ ಬೈಕಿನ ನಡುವೆ ಈ ಸರಣಿ ಅಪಘಾತ ಸಂಭವಿಸಿದ್ದು, ಗಂಭೀರವಾಗಿ ಕಾಯಗೊಂಡಿರುವ ಬೈಕ್ ಸವಾರ ನನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯಿಂದಾಗಿ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ಹೆದ್ದಾರಿಯಲ್ಲಿ ಸಮಸ್ಯೆ ಉಂಟಾಯಿತು. ಪ್ರಕರಣ ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ..