ಬುಧವಾರ ಬೆಳಗ್ಗೆ 11ಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಅವರು ಮ್ಯಾರಾಥಾನ್ ಗೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಯುವ ಜನತೆ ಎಚ್.ಐ.ವಿ ಬಗ್ಗೆ ಸರಿಯಾದ ಮಾಹಿತಿ ತಿಳಿದಿರಬೇಕು ಮತ್ತು ಸದಾ ಜಾಗೃತರಾಗಿರಬೇಕು ಎಂದರು. ವಿವಿಧ ಸಂಘ ಸಂಸ್ಥೆಯ ಆಶ್ರಯದಲ್ಲಿ ಆಯೋಜನೆ ಮಾಡಲಾಗಿದ್ದ ಮ್ಯಾರಥಾನ್ ನಲ್ಲಿ 17 ರಿಂದ 25 ವರ್ಷದೊಳಗಿನ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.