ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ ಹಾಗೂ ರಾಜ್ಯದ ಇತರೆ ಕಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರಿನ ಸಂಪರ್ಕ ಕಲ್ಪಿಸುವಲ್ಲಿ ಇರುವ ತೊಡಕುಗಳ ಕುರಿತಂತೆ ನಗರಾಭಿವೃದ್ಧಿ, ಪೌರಾಡಳಿತ ಇಲಾಖೆ, ಬೆಂಗಳೂರು ಜಲಮಂಡಳಿ, ಕೆಪಿಟಿಸಿಎಲ್, ಬೆಸ್ಕಾಂನ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಸಭೆಯಲ್ಲಿ ಬಹುಕಾಲದಿಂದ ಇರುವ ಸಮಸ್ಯೆಗಳು ಮತ್ತು ಇವಕ್ಕೆ ಪರಿಹಾರ ಮಾರ್ಗೋಪಾಯಗಳ ಬಗ್ಗೆ ಚರ್ಚಿಸಿದರು.