ರಾಜ್ಯ ,ರಾಷ್ಟ್ರ ಮಟ್ಟದಲ್ಲಿ ಹೆಸರುವಾಸಿಯಾಗಿರುವ ಗೌರಿಬಿದನೂರು ಬೈಪಾಸ್ ಗಣೇಶೋತ್ಸವ ಮೂರ್ತಿಯ ಪ್ರತಿಷ್ಠಾಪನೆಯು ಇಂದು ಸಂಜೆ ಶಾಸಕ ಕೆ.ಎಚ್ ಪುಟ್ಟಸ್ವಾಮಿಗೌಡ ಮತ್ತಿತರರು ನೆರವೇರಿಸಿದರು. ಪರಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಯನ್ನು ಸ್ಥಳದಲ್ಲೇ ನಿರ್ಮಾಣ ಮಾಡಿ ನಂತರ ಪ್ರತಿಷ್ಠಾಪಿಸಿ ಈ ಗಣೇಶೋತ್ಸವವನ್ನು ಸುಮಾರು ತಿಂಗಳಿಗೂ ಹೆಚ್ಚು ಕಾಲ ವಿಶೇಷ ಪೂಜೆ ಕೈಂಕರ್ಯಗಳು ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ರಾಜ್ಯ ರಾಷ್ಟ್ರಮಟ್ಟದ ಹಲವಾರು ಧಾರ್ಮಿಕ ಹಾಗೂ ಗಣ್ಯ ವ್ಯಕ್ತಿಗಳನ್ನು ಆಹ್ವಾನಿಸಿ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.