ಮಳವಳ್ಳಿ: ತಾಲ್ಲೂಕಿನ ತಳಗ ವಾದಿ ಗ್ರಾಮದ ಹಾಲು ಉತ್ಪಾದ ಕರ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹನುಮಂತು ಹಾಗೂ ಉಪಾಧ್ಯಕ್ಷ ರಾಗಿ ರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸದರಿ ಹಾಲು ಉತ್ಪಾದಕರ ಸಹಕಾರ ಸಂಘದ ನಿರ್ಧೇಶಕರ ಆಯ್ಕೆಗಾಗಿ ನಿಗಧಿಯಾಗಿದ್ದ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಎಲ್ಲಾ 10 ಮಂದಿ ನಿರ್ಧೇಶಕರು ಅವಿರೋಧವಾಗಿ ಆಯ್ಕೆಯಾ ಗಿದ್ದರು. ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗಾಗಿ ಭಾನುವಾರ ಮಧ್ಯಾಹ್ನ 12.30 ಸಮಯದಲ್ಲಿ ಚುನಾವಣೆ ನಿಗದಿಯಾಗಿತ್ತು . ಅಧ್ಯಕ್ಷರ ಸ್ಥಾನಕ್ಕೆ ಮಾಜಿ ಜಿ ಪಂ ಸದಸ್ಯರಾದ ಹನುಮಂತು, ಉಪಾಧ್ಯಕ್ಷ ಸ್ಧಾನಕ್ಕೆ ರಾಜು ಇವರುಗಳು ಮಾತ್ರ ನಾಮಪತ್ರ ಸಲ್ಲಿಸಿದ್ದ ಹಿನ್ನೆಲೆಯಲ್ಲಿ ಇವರಿಬ್ಬರು ಅವಿರೋಧವಾಗಿ ಆಯ್ಕೆಯಾಗಿ ದ್ದಾರೆ ಎಂದು ಘೋಷಿಸಲಾಯಿತು.