ಯಾದಗಿರಿ ಜಿಲ್ಲೆಯ ಸುರಪುರ ನಗರದ ತಾಲೂಕ ಕ್ರೀಡಾಂಗಣದಲ್ಲಿ 14ರಿಂದ 17 ವರ್ಷ ವಯೋಮಿತಿ ಒಳಗಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ಹಂತದ ತಾಲೂಕ ಮಟ್ಟದ ಕ್ರೀಡಾಕೂಟವನ್ನು ನಡೆಸಲಾಗಿದೆ. ಬುಧವಾರ ಬೆಳಗ್ಗೆ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಸುರಪುರ ನಗರಸಭೆ ಅಧ್ಯಕ್ಷ ಹೀನಾ ಕೌಸರ್ ಅವರು ಭಾಗವಹಿಸಿ ಕ್ರೀಡಾ ಧ್ವಜವನ್ನು ಏರಿಸಿ ನಂತರ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು. ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷ ಪ್ರಕಾಶ ಗುತ್ತೇದಾರ್, ತಾಲೂಕ ಪಂಚಾಯತಿ ಇ ಓ ಬಸವರಾಜ ಸಜ್ಜನ್, ಕ್ಷೇತ್ರ ಶಿಕ್ಷಣಾಧಿಕಾರಿ ಎಲ್ಲಪ್ಪ ಕಾಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ದೈಹಿಕ ಶಿಕ್ಷಕರು ಹಾಗೂ ನೂರಾರು ಜನ ಕ್ರೀಡಾಪಟುಗಳು ಭಾಗವಹಿಸಿದ್ದರು.