ಯಾದಗಿರಿ ನಗರದಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಅಂಗವಾಗಿ ಬೃಹತ್ ಮೆರವಣಿಗೆ ನಡೆಯುತ್ತಿದ್ದು ಶನಿವಾರ ತಡರಾತ್ರಿವರೆಗೆ ಮೆರವಣಿಗೆ ನಡೆಸಲಾಗಿದೆ. ಮೆರವಣಿಗೆಯಲ್ಲಿ 900 ಕ್ಕೂ ಹೆಚ್ಚು ಜನ ಪೊಲೀಸರನ್ನು ನಿಯೋಜಿಸಲಾಗಿದ್ದು 4 ಡ್ರೋಣ್‌ಗಳ ಮೂಲಕ ವೀಕ್ಷಿಸಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಮಾಹಿತಿ ನೀಡಿದ್ದಾರೆ. ಎಂಟು ಕಿಲೋಮೀಟರ್ ವರೆಗೆ ನಡೆಯುವ ಈ ಮೆರವಣಿಗೆಯಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಿದ್ದಾರೆ ಎಂದು ತಿಳಿಸಿದ್ದಾರೆ.