ದಾಂಡೇಲಿ : ಪದವಿಪೂರ್ವ ಶಿಕ್ಷಣ ಇಲಾಖೆಯ ಆಶ್ರಯದಡಿ ಶಿರಸಿಯಲ್ಲಿ ನಡೆದ 19 ವರ್ಷ ವಯೋಮಿತಿಯೊಳಗಿನ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ದಾಂಡೇಲಿಯ ಬಂಗೂರನಗರ ಜ್ಯೂನಿಯರ್ ಕಾಲೇಜಿನ ತಂಡ ಅತ್ಯುತ್ತಮ ಪ್ರದರ್ಶನದೊಂದಿಗೆ ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಗಮನ ಸೆಳೆದಿದೆ. ಶಿರಸಿ ಅರಣ್ಯ ಇಲಾಖೆಯ ಕೋರ್ಟಿನಲ್ಲಿ ನಡೆದ ಈ ಪಂದ್ಯಾವಳಿಯಲ್ಲಿ ಬಂಗೂರನಗರ ಜ್ಯೂನಿಯರ್ ಕಾಲೇಜಿನ ತಂಡ ಶಿರಸಿಯ ತಂಡವನ್ನು ಸೋಲಿಸಿ, ವಿರೋಚಿತ ಪ್ರದರ್ಶನದೊಂದಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನವನ್ನು ತನ್ನದಾಗಿಸಿಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿದೆ.