ಮಲೆನಾಡಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದೆ. ಒಳ ಹರಿವು ಪ್ರಮಾಣ ಮತ್ತಷ್ಟು ಏರಿಕೆಯಾಗಿದ್ದು ಇವತ್ತು 38,931 ಕ್ಯೂಸೆಕ್ ಒಳ ಹರಿವು ಇದೆ. ಒಟ್ಟು 50 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಬಿಡಲಾಗುತ್ತಿದೆ. ಈ ಪೈಕಿ ರೇಡಿಯಲ್ ಗೇಟುಗಳ ಮೂಲಕ 50 ಸಾವಿರ ಕ್ಯೂಸೆಕ್ ನೀರನ್ನು ಹೊರಗೆ ಹರಿಸಲಾಗುತ್ತಿದೆ.