ಯಾದಗಿರಿ ತಾಲೂಕಿನ ಬಾಚವಾರ ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಬಸ್ ಗಳು ಬರುತ್ತಿಲ್ಲ ಎಂದು ಆರೋಪಿಸಿ ಅಖಂಡ ಕರ್ನಾಟಕ ರಕ್ಷಣಾ ಸಮಿತಿ ಸಂಘಟನೆಯ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಮಂಗಳವಾರ ಮಧ್ಯಾನದ ವರೆಗೆ ನಡೆದ ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಂಜುನಾಥ ಬಡಿಗೇರ ಸೇರಿದಂತೆ ಅನೇಕ ಮುಖಂಡರು ಹಾಗೂ ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಬಸ್ ಘಟಕದ ವ್ಯವಸ್ಥಾಪಕರು ಆಗಮಿಸಿ, ಸಮಸ್ಯೆ ಪರಿಹರಿಸುವ ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಲಾಯಿತು.