ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಭಾರತೀಯ ಜನತಾ ಪಾರ್ಟಿಯ ವತಿಯಿಂದ ತಹಸೀಲ್ದಾರರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ಶ್ರೀ ಕ್ಷೇತ್ರ ಧರ್ಮಸ್ಥಳದ ಹೆಸರಿಗೆ ಅಪಪ್ರಚಾರ ಮಾಡುತ್ತಿರುವುದನ್ನು ಖಂಡಿಸಿ ಪ್ರತಿಭಟನೆಯನ್ನು ಮಾಡಲಾಯಿತು. ಈ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಿಜೆಪಿಯ ಸದಸ್ಯರಾದ ಕೆ ಕರಿಯಪ್ಪ ಮಾತನಾಡಿ ದೇಶದಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿರುವ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಜನ ನಿತ್ಯ ಲಕ್ಷಾಂತರ ಮಂದಿ ಭಕ್ತಾದಿಗಳು ಆಗಮಿಸುತ್ತಾರೆ ಹಿಂದುಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧೆಯ ಕೇಂದ್ರವಾಗಿದೆ ಇದನ್ನು ಅಪಪ್ರಚಾರ ಮಾಡಲು ಹಾಗೂ ಸುಳ್ಳು ಪ್ರಚಾರವನ್ನು ಮಾಡಲು ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಇದು ರಾಜಕೀಯ ಷಡ್ಯಂತರ ಎಂದು ಮಾತನಾಡಿದರು.