ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಸಾಂವಿಧಾನಿಕ ನಡೆ ಅನುಸರಿಸಲು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಿಲ್ಲಾ ಪಂಚಾಯತ್ ವರೆಗೆ ಮೆರವಣಿಗೆಯಲ್ಲಿ ತೆರಳಿ ಹಾರ ತುರಾಯಿಗಳಿಂದ ಸನ್ಮಾನಿಸಿ ಧೈರ್ಯ ತುಂಬಲಾಗುವುದು ಎಂದು ಕೆ ಆರ್ ಎಸ್ ಪಕ್ಷದ ಕಾರ್ಯಕರ್ತ ಮಂಜುನಾಥ್ ಹಿರೇಚೌಟಿ ಹೇಳಿದ್ದಾರೆ. ಶಿವಮೊಗ್ಗ ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾನೂನು ಬದ್ಧ ಆದೇಶವನ್ನು ಪಾಲನೆ ಮಾಡದೆ ಬೆಸ್ತರಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.